top of page

ಕನ್ನಡ ವಿವಿಯ ಪುಸ್ತಕಗಳನ್ನು ಡಿಜಿಟಲೀಕರಣಗೊಳಿಸಿ ಜ್ಞಾನಾವರಣ ವೃದ್ಧಿಸಿ,60 ಪುಸ್ತಕ ಲೋಕಾರ್ಪಣೆಗೊಳಿಸಿದ: ಶಾಸಕ ಹೆಚ್.ಆರ್.ಗವಿಯಪ್ಪ

  • Writer: newsnowvijayanagar
    newsnowvijayanagar
  • Apr 3
  • 1 min read

ವಿಜಯನಗರ(ಹೊಸಪೇಟೆ) : ಹಂಪಿ ಕನ್ನಡ ವಿಶ್ವವಿದ್ಯಾಲಯ ವಿದ್ಯಾರಣ್ಯ ಮಂಟಪ ಸಭಾಂಗಣದಲ್ಲಿ 33ನೇ ನುಡಿಹಬ್ಬ ಪ್ರಯುಕ್ತ ಪ್ರಸಾರಾಂಗ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ 60 ಪುಸ್ತಕಗಳನ್ನು ಲೋಕಾರ್ಪಣೆಗಳಿಸಿ ಮಾತನಾಡಿದರು,ಕನ್ನಡದ ಜ್ಞಾನವನ್ನು ಅನಾವರಣಗೊಳಿಸಿ ಇನ್ನಷ್ಟು ವೃದ್ಧಿಸಲು ಹಂಪಿ ವಿಶ್ವವಿದ್ಯಾಲಯದಿಂದ ಪ್ರಕಟವಾದ ಪುಸ್ತಕಗಳನ್ನು ಡಿಜಟಲೀಕರಣಗೊಳಿಸಬೇಕಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಅಭಿಪ್ರಾಯಪಟ್ಟರು.


ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿಹಬ್ಬದ ಪ್ರಯುಕ್ತ ಕಲೆ, ಸಾಹಿತ್ಯ,ಇತಿಹಾಸ,ವಿಜ್ಞಾನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಬಗೆಯ 60 ಪುಸ್ತಕಗಳನ್ನು ಪ್ರಕಟಿಸಿರುವುದು ಉತ್ತಮವಾದ ಕಾರ್ಯ. ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು.


ಹಂಪಿಯ ಕನ್ನಡ ವಿವಿಯ ಐಕಾನಿಕ್ ವಿಶ್ವವಿದ್ಯಾಲವಾಗಿದೆ.ಇಂತಹ ವಿಶಿಷ್ಟವಾದ ವಿಶ್ವವಿದ್ಯಾಲಯವು ನಮ್ಮ ಭಾಗದಲ್ಲಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಹೆಮ್ಮೆಯ ವಿಷಯ. ಅಬಿವೃದ್ಧಿಗೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ನೀಡಲು ಕ್ರಮವಹಿಸಲಾಗುವುದು. ವಿಜಯನಗರ ಜಿಲ್ಲೆಗೆ ಆದಾಯದ ಮೂಲ ಪ್ರವಾಸೋದ್ಯಮವಾಗಿದೆ ಆದ್ದರಿಂದ ವಿಶ್ವವಿದ್ಯಾಲಯದಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಆರಂಭಿಸುವುದರ ಮೂಲಕ ದೇಶಿಯ ಆಹಾರ, ಕಲೆ,ಸಂಸ್ಕೃತಿಯನ್ನು ಪರಿಚಯಿಸುವ ಕೆಲಸ ಮಾಡಬೇಕು.ಹಂಪಿಯ ಸ್ಮಾರಕಗಳು ಮತ್ತು ಪರಿಸರವನ್ನು ನೋಡಲು ಬರುವ ಪ್ರವಾಸಿಗರು ಕನ್ನಡ ವಿಶ್ವವಿದ್ಯಾಲಯಕ್ಕೆ ಆಗಮಿಸಿ ಇಲ್ಲಿನ ಪುಸ್ತಕಗಳನ್ನು ವೀಕ್ಷಣೆಗೆ ಮುಂದಾಗಬೇಕು ಎಂದರು.


ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲೂ ಇಲ್ಲದ ಸಂಶೋಧನಾ ಕಾಳಜಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿದೆ. ಇಲ್ಲಿಯವರೆಗೆ ಒಟ್ಟಾರೆ 1650 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದೆ.ಪ್ರಸಾರಂಗದಿಂದ ಉತ್ಕೃಷ್ಟ ಗುಣಮಟ್ಟದ ಸಂಶೋಧಾನತ್ಮಕ ಪುಸ್ತಕಗಳ ಪ್ರಕಟಣೆಗೆ ಆದ್ಯತೆ ನೀಡಲಾಗಿದೆ.ಮುಖ್ಯವಾಗಿ ನಿರ್ಲಕ್ಷ್ಯಕ್ಕೊಳಗಾದ ಅನೇಕ ವಿಷಯಗಳನ್ನು ತಳಮಟ್ಟದಿಂದ ಸಂಶೋಧನೆಯನ್ನು ಮಾಡಿ ಪುಸ್ತಕಗಳನ್ನು ಪ್ರಕಟಿಸಲಾಗುತ್ತಿದೆ.ಸರ್ಕಾರದ ಅನುದಾನದ ಕೊರತೆಯ ನಡುವೆಯು ಸಂಶೋಧನೆ ನಿರಂತರವಾಗಿ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಉತ್ತಮವಾದ ಪುಸ್ತಕಗಳು, ಚಿಂತಕರ ಆಲೋಚನೆಗಳು ಪುಸ್ತಕದ ರೂಪದಲ್ಲಿ ಓದುಗರ ಕೈ ಸೇರಬೇಕು.ಅತ್ಯಂತ ಕಡಿಮೆ ಬೆಲೆಗೆ ಪ್ರಸಾರಂಗ ಪುಸ್ತಕಗಳನ್ನು ಪ್ರಕಟಿಸುತ್ತದೆ ಎಂದರು.


ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ವಿಜಯ್ ಪೂಣ್ಣಚ್ಚ ತಂಬಂಡವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಹೆಚ್ಚು ಪುಸ್ತಕಗಳು ಮಾರಾಟವಾಗಿವೆ. ನಾಡಿನ ಎಲ್ಲೆಡೆ ವಿಶ್ವವಿದ್ಯಾಲಯದ ಜ್ಞಾನವನ್ನು ತಲುಪಿಸುವ ಕೆಲಸ ನಡೆಯುತ್ತಿದೆ.ಪ್ರಸಾರಾಂಗವು ಸಾಮಾಜಿಕ,ರಾಜಕೀಯ, ಸಾಹಿತ್ಯ,ಚರಿತ್ರೆ,ವಿಜ್ಞಾನ ಹೀಗೆ ಎಲ್ಲ ಪ್ರಕಾರದ ಪುಸ್ತಕಗಳನ್ನು ಪ್ರಕಟಿಸಿಕೊಂಡು ಬಂದಿದೆ. ಪ್ರಸಾರಾಂಗದ ಹೊಸ ಕಟ್ಟಡ ನಿರ್ಮಾಣ ಶೇ.80 ರಷ್ಟು ಪೂರ್ಣಗೊಂಡಿದೆ.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ನಿಗಮದಿಂದ ಅನುದಾನ ಬಿಡುಗಡೆಯಾದರೆ ಶೀಘ್ರವೇ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.


ಕಾರ್ಯಕ್ರಮದಲ್ಲಿ ಸಾಹಿತಿಗಳು,ಪುಸ್ತಕ ಪ್ರಕಟಿಸಿದ ಲೇಖಕರು,ವಿವಿಧ ನಿಕಾಯಗಳ ಡೀನರು,ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Recent Posts

See All

Comments


bottom of page