top of page

ಹಂಪಿ ಉತ್ಸವಕ್ಕೆ ದಿನಗಣನೆ : ಫೆ.28 ರಂದು ಉದ್ಘಾಟನೆ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್ ಭಾಗಿ

  • Writer: newsnowvijayanagar
    newsnowvijayanagar
  • Feb 25
  • 1 min read

ವಿಜಯನಗರ (ಹೊಸಪೇಟೆ) ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಹಂಪಿ ಉತ್ಸವ-2025 ಕ್ಕೆ ದಿನಗಣನೆ ಆರಂಭವಾಗಿದೆ. ಫೆ.28 ಹಾಗೂ ಮಾರ್ಚ್ 1 ಮತ್ತು 2 ತಾರೀಖಿನಂದು ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ ಜರುಗಲಿದೆ.

ಫೆ.28 ಶುಕ್ರವಾರ ಸಂಜೆ 6 ಗಂಟೆಗೆ ಗಾಯತ್ರಿ ಪೀಠದ ಬಳಿ ನಿರ್ಮಿಸಲಾಗಿರುವ ಎಂ.ಪಿ.ಪ್ರಕಾಶ್ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂಪಿ ಉತ್ಸವ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತರಿರುವರು. ವಸತಿ, ವಕ್ಘ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್, ಸಾರಿಗೆ ಮತ್ತು ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಗೌರವ ಉಪಸ್ಥಿತರಿರುವರು. ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸುವರು. ಗಣ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್ ಹಾಗೂ ಡಾ.ಪ್ರಭಾ ಮಲ್ಲಿಕಾರ್ಜುನ, ಗೌರವ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಪಾಲ್ಗೊಳ್ಳುವರು.

Recent Posts

See All

Comments


bottom of page