top of page

ಪ್ರಯೋಗಶಾಲಾ ತಂತ್ರಜ್ಞರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಅವಕಾಶ

  • Writer: newsnowvijayanagar
    newsnowvijayanagar
  • Mar 25
  • 1 min read

ವಿಜಯನಗರ (ಹೊಸಪೇಟೆ) : ರಾಷ್ಟಿçÃಯ ಆರೋಗ್ಯ ಅಭಿಯಾನ ಯೋಜನೆಯಡಿ ಕ್ಲಿನಿಕ್‌ಗಳಿಗೆ ಹೊಸದಾಗಿ ಮಂಜೂರಾಗಿರುವ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಹಾಗೂ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ತಿಳಿಸಿದ್ದಾರೆ.

ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯ ನೇಮಕಾತಿಯ ಒಟ್ಟು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಪಟ್ಟಿ ಸೇರಿದಂತೆ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳ ಕಚೇರಿಯ ಸೂಚನಾಫಲಕದಲ್ಲಿ ಪ್ರಕಟಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಂದ ಮಾ.29ರ ಸಂಜೆ 5:30 ರ ಒಳಗಾಗಿ ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಅಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All

Comments


bottom of page