top of page

ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

  • Writer: newsnowvijayanagar
    newsnowvijayanagar
  • Mar 19
  • 1 min read

ವಿಜಯನಗರ (ಹೊಸಪೇಟೆ), ಮಾ.19:ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು ಏ.4 ರ ವರೆಗೆ ನಡೆಯಲಿದೆ. 71 ಪರೀಕ್ಷಾ ಕೇಂದ್ರಗಳಲ್ಲಿ ಕೆಸ್ವಾನ್ ಮೂಲಕ ವೆಬ್‌ಕಾಸ್ಟಿಂಗ್ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಈ ಬಾರಿ ಹೊಸ ವಿದ್ಯಾರ್ಥಿಗಳು 21429 ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು 1271 ಸೇರಿದಂತೆ ಒಟ್ಟು 22700 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಮಾರ್ಚ್ 12 ರಂದು 71 ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಪಾಲಕರ ಸಭೆ ಕರೆದು ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಪ್ರಸ್ತುತ ಎಲ್ಲಾ ಪರೀಕ್ಷಾ ಸಿದ್ದತಾ ಪ್ರಕ್ರಿಯೆಯನ್ನು ಪರಿಶೀಲಿಸುವ ಸಂಬಂಧ ಕೆಸ್ವಾನ್‌ನಲ್ಲಿ ವೆಬ್‌ಕಾಸ್ಟಿಂಗ್ ಸಿದ್ಧಪಡಿಸಿದ್ದು, ಕಾರ್ಯದ ಜವಾಬ್ದಾರಿಯನ್ನು ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಕ್ರಮ ಷಾ ಅಲಿ ಇವರು ಸಂಪೂರ್ಣ ನಿಗಾವಹಿಸುವರು ಎಂದು ತಿಳಿಸಿದ್ದಾರೆ.


ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಸುತ್ತ ನಿರ್ಬಂಧಿತ ಪ್ರದೇಶ ಘೋಷಣೆ :ಎಂ.ಎಸ್.ದಿವಾಕರ ಅದೇಶ.


2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ ಆದೇಶಿಸಿದ್ದಾರೆ.


ಜಿಲ್ಲೆಯಾದ್ಯಂತ ಮಾ.21 ರಿಂದ ಏ.04 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸುಗಮವಾಗಿ ನಡೆಯುವ ನಿಟ್ಟಿನಲ್ಲಿ 71 ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ, ನಿರ್ಬಂಧಿತ ಪ್ರದೇಶದ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಯಾವುದೇ ಬಾಹ್ಯ, ಅನ್ಯ ವ್ಯಕ್ತಿಗಳಿಗೆ ಹಾಗೂ ಎಲ್ಲಾ ಮಾಧ್ಯಮದವರಿಗೆ ಪ್ರವೇಶ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಅನಿವಾರ್ಯ ಸಂದರ್ಭಗಳಲ್ಲಿ ಸಂವಹನಕ್ಕಾಗಿ ಬೇಸಿಕ್ ಮೊಬೈಲ್ ಪೋನ್ ಬಳಸಲು ಮಾತ್ರ ಅನುಮತಿ ನೀಡಲಾಗಿದ್ದು, ಸದರಿ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಪೋನ್‌ನನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---

Recent Posts

See All

תגובות


bottom of page