top of page

ಕರೋನಾ ವೇಳೆ ಭಾರತದ ನೆರವು: ಪ್ರಧಾನಿ ಮೋದಿಗೆ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ!

  • Nov 14, 2024
  • 1 min read

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ನೀಡಿದ ಬೆಂಬಲ, ನೆರವಿಗೆ ಕೃತಜ್ಞತೆಯ ಸಂಕೇತವಾಗಿ ಮತ್ತು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯ ಸಂಕೇತವಾಗಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.











ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ್ದಕ್ಕಾಗಿ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ 'ಡೊಮಿನಿಕಾ ಅವಾರ್ಡ್ ಆಫ್ ಆನರ್' ಅನ್ನು ಪ್ರಧಾನಿ ಮೋದಿಯವರಿಗೆ ನೀಡಲಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ನೀಡಿದ ಬೆಂಬಲ, ನೆರವಿಗೆ ಕೃತಜ್ಞತೆಯ ಸಂಕೇತವಾಗಿ ಮತ್ತು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯ ಸಂಕೇತವಾಗಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


2021ರ ಫೆಬ್ರವರಿಯಲ್ಲಿ COVID-19 ಉತ್ತುಂಗದಲ್ಲಿದ್ದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಡೊಮಿನಿಕಾಗೆ 70,000 ಡೋಸ್ ಅಸ್ಟ್ರಾಜೆನೆಕಾ ಲಸಿಕೆಯನ್ನು ಕಳುಹಿಸಿತ್ತು. ಈ ಲಸಿಕೆ ಪೂರೈಕೆಯನ್ನು ಭಾರತದ 'ಲಸಿಕೆ ಮೈತ್ರಿ' ನೀತಿಯ ಅಡಿಯಲ್ಲಿ ಮಾಡಿತ್ತು. ಈ ಮೂಲಕ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುವ ಗುರಿ ಭಾರತ ಹೊಂದಿತ್ತು.


ಮುಂಬರುವ ಭಾರತ-CARICOM (ಕೆರಿಬಿಯನ್ ಸಮುದಾಯ) ಶೃಂಗಸಭೆಯಲ್ಲಿ ಡೊಮಿನಿಕನ್ ಅಧ್ಯಕ್ಷ ಸಿಲ್ವಾನಿ ಬರ್ಟನ್ ಪ್ರಧಾನಿ ಮೋದಿಯವರಿಗೆ ಗೌರವವನ್ನು ನೀಡಲಿದ್ದಾರೆ. ಈ ಶೃಂಗಸಭೆಯು ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19 ಮತ್ತು 21ರ ನಡುವೆ ನಡೆಯಲಿದೆ. ಈ ಸಂದರ್ಭದಲ್ಲಿ, ಭಾರತ ಮತ್ತು ಕೆರಿಬಿಯನ್ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಪರಿಗಣಿಸಲಾಗುವುದು.

Comments


bottom of page